ಅಷ್ಟದಳಕಮಲವ ಮೆಟ್ಟಿ ಚರಿಸುವಹಂಸನ ಭೇದವ ಹೇಳಿಹೆನು:ಪೂರ್ವದಳಕೇರಲು ಗುಣಿಯಾಗಿಹನು.ಅಗ್ನಿದಳಕೇರಲು ಕ್ಷುಧೆಯಾಗಿಹನು.ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು.ನೈಋತ್ಯದಳಕೇರಲು ಅಸತ್ಯನಾಗಿಹನು.ವರುಣದಳಕೇರಲು ನಿದ್ರೆಗೆಯ್ವುತಿಹನು.ವಾಯುದಳಕೇರಲು ಸಂಚಲನಾಗಿಹನು.ಉತ್ತರದಳಕೇರಲು ಧರ್ಮಿಯಾಗಿಹನು.ಈಶಾನ್ಯದಳಕೇರಲು ಕಾಮಾತುರನಾಗಿಹನು.ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ:ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆಅಷ್ಟ ಲಿಂಗಕಳೆಯ ಪ್ರತಿಷ್ಠಿಸಿಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲುಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
 4 Matching Annotations
        
        - Nov 2018
- 
            
www.vachana.sanchaya.net www.vachana.sanchaya.net- 
  
- 
  ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ.ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ.ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ.ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆಸರ್ವಾಂಗಸನ್ನಿಹಿತನಾಗಿ ನಿಂದೆ.ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸುಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ. 
- 
  ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ,ತಿಂಗಳ ಸೂಡನಾದೆ ನೋಡಾ ಅಯ್ಯಾ.ಮಂಗಳಮೂರ್ತಿ ಗಂಗಾಜೂಟಾಂಗಮಯಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ,ನಿಜದ ನಿರ್ವಯಲಲ್ಲಯ್ಯನೆ. 
- 
  ಅಗ್ಘವಣಿ ಸುಯಿದಾನವಾದ ಶರಣಂಗೆ,ತನು ಸುಯಿದಾನವಾಗಬೇಕು.ತನು ಸುಯಿದಾನವಾದ ಶರಣಂಗೆಮನ ಸುಯಿದಾನವಾಗಬೇಕು.ಮನ ಸುಯಿದಾನವಾದ ಶರಣಂಗೆಪ್ರಾಣದ ಮೇಲೆ ಲಿಂಗ ಸಯವಾಗಬೇಕು.ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ 
 
-